ಪರಿಸರ ರಕ್ಷಿಸೋಣ ಜೀವರಾಶಿ ಉಳಿಸೋಣ: ಶಾಸಕ ರವಿಕುಮಾರ್ ಗಣಿಗ ಕರೆ

World Environment Day Mandya
Published on

ಮಂಡ್ಯ: ಪರಿಸರ ಉಳಿಸುವ ಮೂಲಕ ಸಕಲ ಜೀವರಾಶಿಯನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಶಾಸಕ ರವಿಕುಮಾರ್ ಗಣಿಗ ಕರೆ ನೀಡಿದರು.

ನಗರದ ಹೊಸಹಳ್ಳಿ ಸರ್ಕಾರಿ ಶಾಲಾ ಆವರಣದಲ್ಲಿ ‘ಶಾಲೆಯ ಹಸಿರು ಸಿರಿ ಇಕೋ ಕ್ಲಬ್’ನಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಟ್ಟು ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಪರಿಸರ ಪ್ರಜ್ಞೆ ಬೆಳೆಸುವ ಹೊಣೆಗಾರಿಕೆ ಶಿಕ್ಷಕರದಾಗಿದೆ. ಮುಂದಿನ ದಿನಗಳಲ್ಲಿ ಶಾಲೆಯ ಅಭಿವೃದ್ದಿಗೆ ಗ್ರಾಮಸ್ಥರು ಮತ್ತು ಯುವಮುಖಂಡರು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಸಹಕಾರ ಪಡೆಯಲಾಗುವುದು. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಿ ಗುಣಮಟ್ಟದ ಶಿಕ್ಷಣ ಹಾಗೂ ಸೌಲಭ್ಯ ಒದಗಿಸಲು ಸಂಕಲ್ಪಿಸಲಾಗಿದೆ ಎಂದು ತಿಳಿಸಿದರು.

ಎಸ್‌ಡಿಎಂಸಿ ಅಧ್ಯಕ್ಷ ಹೊಸಹಳ್ಳಿ ಶೇಖರ್, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕರಾದ ಶಿವಲಿಂಗೇಗೌಡ, ಬೋರೇಗೌಡ, ಯುವ ಮುಖಂಡ ಶ್ರೀಕಾಂತ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net