ವಿಶ್ವ ಆಹಾರ ಸುರಕ್ಷತಾ ದಿನ

aharadina
Published on

ಮಡಿಕೇರಿ: ನಾಪೋಕ್ಲು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ವಿಶ್ವ ಆಹಾರ ಸುರಕ್ಷತಾ ದಿನವನ್ನು ಇತ್ತೀಚೆಗೆ ಆಚರಿಸಲಾಯಿತು.


ವಿಶ್ವ ಆಹಾರ ಸುರಕ್ಷತಾ ದಿನದ ಮಹತ್ವ, ಆಹಾರ ಸುರಕ್ಷತೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ನೀಡಲಾಯಿತು. ಆಹಾರ ಕಲಬೆರೆಕೆ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ನೀಡಲಾಯಿತು. ನಂತರ ಮಕ್ಕಳಿಗೆ ಪ್ರಬಂಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು.


ಪ್ರಸ್ತುತ ವರ್ಷದಲ್ಲಿ ವಿಶ್ವ ಆಹಾರ ಸುರಕ್ಷತಾ ದಿನದ ಘೋಷವಾಕ್ಯ ಆಹಾರ ಸುರಕ್ಷತೆ ಅನಿರೀಕ್ಷಿತ ಘಟನೆಗಳಿಗೆ ಸಿದ್ದರಾಗಿ ಎಂಬುದರ ಬಗ್ಗೆ ಮತ್ತು ಇದರ ಮಹತ್ವದ ಬಗ್ಗೆ ಮಾಹಿತಿ ನೀಡಲಾಯಿತು.


ಜಿಲ್ಲಾ ಅಂಕಿತ ಅಧಿಕಾರಿ ಡಾ.ಇ.ಅನಿಲ್ ಧಾವನ್ ಮತ್ತು ನಾಪೋಕ್ಲು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಹಿರಿಯ ಆಹಾರ ಸುರಕ್ಷತಾಧಿಕಾರಿ ಜೆ.ಎನ್.ಮಂಜುನಾಥ್, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿ ನಿಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net