ದೈಹಿಕ ಆರೋಗ್ಯದಂತೆ ಮಾನಸಿಕ ಆರೋಗ್ಯಕ್ಕೂ ಪ್ರಾಮುಖ್ಯತೆ ನೀಡಿ: ಕೆ. ಗುರುಪ್ರಸಾದ

11GDG04
ಗದಗ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಆರೋಗ್ಯ ಜಾಗೃತಿ ರಥಕ್ಕೆ ಕೆ.ಗುರುಪ್ರಸಾದ ಚಾಲನೆ ನೀಡಿದರು. ಡಾ. ರಾಜೇಂದ್ರ ಬಸರಿಗಿಡದ, ಡಾ. ರಾವೇಂದ್ರ ಪಾಟೀಲ್​, ಡಾ. ವೆಂಕಟೇಶ ರಾಠೋಡ ಹಲವರು ಇದ್ದರು.
Published on

ವಿಜಯವಾಣಿ ಸುದ್ದಿಜಾಲ ಗದಗ
ದೈಹಿಕ ಆರೋಗ್ಯದಂತೆ ಮಾನಸಿಕ ಆರೋಗ್ಯಕ್ಕೂ ಹೆಚ್ಚು ಪ್ರಾಮುಖ್ಯತೆ ನೀಡಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿರ್ ಕೆ. ಗುರುಪ್ರಸಾದ ತಿಳಿಸಿದರು.
ಜಿಲ್ಲಾಡಳಿತ ವತಿಯಿಂದ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಬುಧವಾರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಜಾಗೃತಿ ರಥ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇತ್ತಿಚಿನ ದಿನಗಳಲ್ಲಿ ಹೆಚ್ಚು ಒತ್ತಡ ಕಾರಣದಿಂದ ಮಾನಸಿಕ ಖಾಯಿಲೆಗಳು ಜನ ಸಾಮಾನ್ಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಜನರಲ್ಲಿ ಮಾನಸಿಕ ಖಾಯಿಲೆಗಳ ಕುರಿತು ಅರಿವು ಇಲ್ಲದ ಕಾರಣ ಚಿಕಿತ್ಸೆಗೆ ಬರುವುದು ಬಹು ವಿರಳವಾಗಿದೆ. ಮಾನಸಿಕ ಆರೋಗ್ಯ ಹಾಗೂ ಖಾಯಿಲೆಗಳ ಕುರಿತು ಹೆಚ್ಚು ಅರಿವು ಮೂಡಿಸುವುದು ಅವಶ್ಯವಾಗಿದೆ. ದೈಹಿಕ ಆರೋಗ್ಯಕ್ಕೆ ಎಷ್ಟು ಪ್ರಾಮುಖ್ಯತೆ ನೀಡುತ್ತೆವೆಯೊ ಅದಕ್ಕಿಂತ ಹೆಚ್ಚು ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಬೇಕು ಎಂದರು.
ಪ್ರತಿಯೊಬ್ಬರೂ ಮಾನಸಿಕ ಅಸ್ವಸ್ಥರಿಗೆ ಗೌರವ ನೀಡಿ ಅವರನ್ನು ಮುಖ್ಯ ವಾಹಿನಿಗೆ ತರುವುದು ಎಲ್ಲರ ಕರ್ತವ್ಯವಾಗಿದೆ. ಮಾನಸಿಕ ಅನಾರೋಗ್ಯಕ್ಕೆ ಕಾರಣವಾಗಿರುವ ಒತ್ತಡವನ್ನು ನಿರ್ವಹಿಸುವ ಕಲೆಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕೆಂದು ಕೆ.ಗುರುಪ್ರಸಾದ ತಿಳಿಸಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ. ರಾಜೇಂದ್ರ ಬಸರಿಗಿಡದ ಅಧ್ಯತೆ ವಹಿಸಿದ್ದರು. ಡಾ. ರಾವೇಂದ್ರ ಪಾಟೀಲ್​, ಡಾ. ವೆಂಕಟೇಶ ರಾಠೋಡ, ಡಾ. ಪ್ರೀತ ಖೋನಾ, ಡಾ. ರವಿ ಕಡಗಾವಿ, ಗೋಪಾಲ ಸುರಪುರ, ವೈ. ಎನ್​. ಕಡೇಮನಿ, ವೈ.ವೈ. ಹಕ್ಕಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net