ಪ್ರಪಂಚವೇ ಭಾರತದತ್ತ ನೋಡುವಂತೆ ಕೆಲಸ

04 Sirwar 1
Published on

ಸಿರವಾರ: ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಬಿಜೆಪಿಯಿಂದ ಸೋಮವಾರ ಗೋಡೆ ಬರಹ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮಂಡಲ ಅಧ್ಯಕ್ಷ ಜೆ.ದೇವರಾಜಗೌಡ ಚಾಲನೆ ನೀಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ 10 ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳೊಂದಿಗೆ ದೇಶದ ಭದ್ರತೆ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ದೇಶಕ್ಕಾಗಿ ಹಗಲಿರುಳು ಕೆಲಸ ಮಾಡುವ ಮೂಲಕ ಪ್ರಪಂಚವೇ ಭಾರತದ ಕಡೆ ತಿರುಗಿ ನೋಡುವಂತೆ ಮಾಡಿದ್ದಾರೆ. ದೇಶದ ಹಿತ ಚಿಂತಕ, ಶುದ್ಧಹಸ್ತದ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವ ಮೂಲಕ ದೇಶದ ಸವಾರ್ಂಗೀಣ ಅಭಿವೃದ್ಧಿಗೆ ನಮ್ಮ ಕೊಡುಗೆ ನೀಡಬೇಕಿದೆ ಎಂದರು.

ಪ್ರಮುಖರಾದ ಬೈನೇರ ರಾಮಯ್ಯ, ಸುರೇಶಗೌಡ ನವಲಕಲ್, ಎಚ್.ಕೆ.ಅಮರೇಶ, ಕೆ.ರಾಘು ಖಾಜನಗೌಡ, ಭೀಮಾಣ್ಣ, ಅಮರೇಶಗೌಡ ಹುಂಚೇಡ್, ಮಲ್ಲಿಕಾರ್ಜುನ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net