

ಬಾದಾಮಿ: ಪಟ್ಟಣದಲ್ಲಿ ಶುಕ್ರವಾರ ತಾಲೂಕು ಮಟ್ಟದ ವಿಶ್ವ ಮಲೇರಿಯಾ ದಿನಾಚರಣೆ, ಜನಜಾಗೃತಿ ಜಾಥಾ, ಮಲೇರಿಯಾ ತಡೆಗೆ ವಸ್ತು ಪ್ರದರ್ಶನ ಹಾಗೂ ಜಾಹೀರಾತು ವಿತರಣೆ ಜರುಗಿತು.
ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಬಿ. ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕಾಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ವಿ.ಕೆ. ಶೆಟ್ಟರ ಅತಿಥಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಮಲೇರಿಯಾ ರೋಗ, ಅದರ ಲಕ್ಷಣಗಳು ಮತ್ತು ಚಿಕಿತ್ಸೆ, ಮಲೇರಿಯಾ ರೋಗ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯ ಪಾತ್ರ, ಸೊಳ್ಳೆ ನಿಯಂತ್ರಣ ಹಾಗೂ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಕುರಿತು ಡಾ. ಮಂಜುಳಾ ಗುರಾಣಿ, ಮಕ್ಕಳ ತಜ್ಞೆ ಡಾ. ಜ್ಯೋತಿ ಹಳ್ಳಿಕೇರಿ, ಕೆ.ಪಿ. ಹಂಪಿಹೋಳಿ ಮಾಹಿತಿ ನೀಡಿದರು.
ತಾಲೂಕು ಆಸ್ಪತ್ರೆ ಸಿಬ್ಬಂದಿ, ಬಾದಾಮಿ ತಾಲೂಕಿನ ಆರೋಗ್ಯ ಕೇಂದ್ರಗಳ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಶ್ರೀ ಬನಶಂಕರಿ ಪ್ಯಾರಾಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಲ್.ಎಚ್. ಗೋಪಾಲಗೌಡರ ಪ್ರಾರ್ಥಿಸಿದರು. ಪಿ.ಎಚ್.ಮಹಾಲಿಂಗಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಎಸ್. ಅಂಗಡಿ ಸ್ವಾಗತಿಸಿದರು. ಆರ್.ಬಿ. ಹೊತಗಿಗೌಡರ ವಂದಿಸಿದರು.