ಮಾನಸಿಕ ಆರೋಗ್ಯ ವಿಶ್ವ ದಿನಾಚರಣೆ, ಜಾಗೃತಿ ಜಾಥಾ

MANASIKA AROGYA
ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್. ಹಾಗರಗಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಡಾ. ಪರಶುರಾಮ ಹಿಟ್ನಳ್ಳಿ, ಜಿ.ಎಂ. ಕೊಲೂರ, ಡಾ.ಸಂಪತ್ತ ಗುಣಾರಿ ಮತ್ತಿತರರಿದ್ದಾರೆ.
Published on

ವಿಜಯಪುರ: ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯವಾದದ್ದು. ಹೀಗಾಗಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಓದು, ಸಂಗೀತ, ಧ್ಯಾನ, ಆಟೋಟಗಳಂತಹ ಉತ್ತಮ ಹವ್ಯಾಸಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್. ಹಾಗರಗಿ ಹೇಳಿದರು.

ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ಇವರ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಮಾನಸಿಕ ಆರೋಗ್ಯ ವಿಶ್ವ ದಿನ ಆಚರಣೆ’ ಹಿನ್ನೆಲೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವವರು ಮನಸ್ ಉಚಿತ ಸಹಾಯವಾಣಿ- 14416 ಕರೆ ಮಾಡಿ ಆಪ್ತ ಸಮಾಲೋಚನೆ ಪಡೆದಕೊಳ್ಳಬಹುದು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮನೋವೈದ್ಯರು, ಆಪ್ತ ಸಮಾಲೋಚಕರು ಒತ್ತಡ ಮುಕ್ತ ಜೀವನ ನಡೆಸಲು ಉಚಿತ ಸಲಹೆಗಳನ್ನು ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಂಪತ್ತ ಗುಣಾರಿ ಮಾತನಾಡಿ, ಆರೋಗ್ಯವೇ ಭಾಗ್ಯ ಎಂಬಂತೆ ಸಂಪೂರ್ಣ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅವಶ್ಯಕವಾಗಿದೆ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎಂ. ಕೊಲೂರ, ಸುರೇಶ ಹೊಸಮನಿ ಸೇರಿದಂತೆ ಜಿಲ್ಲಾ ಮಾನಸಿಕ ಆರೋಗ್ಯ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಸಿಬ್ಬಂದಿ, ತುಳಜಾಭವಾನಿ ನರ್ಸಿಂಗ್ ಕಾಲೇಜ್, ಅಶ್ವಿನಿ ನರ್ಸಿಂಗ್ ಕಾಲೇಜ್, ಬಾಂಗಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಿದ್ಧೇಶ್ವರ ದೇವಸ್ಥಾನದಿಂದ ಮಾರುಕಟ್ಟೆ ರಸ್ತೆಯ ಮೂಲಕ ಜಿಲ್ಲಾ ಆರೋಗ್ಯ ಕುಟುಂಬ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅವರಣದವರೆಗೆ ಜಾಥಾ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net