ಒತ್ತಡದ ಬದುಕಿನಿಂದ ಮಾನಸಿಕ ಖಿನ್ನತೆ ಹೆಚ್ಚು: ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕಿ ಡಾ.ಭಾಗ್ಯವತಿ

World Mental Health Day at Mims
Published on

ಮಂಡ್ಯ: ಒತ್ತಡದ ಬದುಕಿನಿಂದಾಗಿ ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಮಿಮ್ಸ್‌ನ ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕಿ ಡಾ.ಭಾಗ್ಯವತಿ ಹೇಳಿದರು.

ನಗರದ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್)ಯಲ್ಲಿ ಬುಧವಾರ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಬೀದಿ ನಾಟಕಗಳನ್ನು ಈಗಾಗಲೇ ಪ್ರದರ್ಶಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.

ಮನೋವೈದ್ಯಕೀಯ ವಿಭಾಗದ ನಿವೃತ್ತ ಎಚ್‌ಒಡಿ ಡಾ.ರಘುರಾಮ್ ಕಾರ್ಯಕ್ರಮ ಉದ್ಘಾಟಿಸಿದರು. ಮಿಮ್ಸ್‌ನ ನಿರ್ದೇಶಕ ಡಾ.ಬಿ.ಜೆ.ಮಹೇಂದ್ರ, ನಿಮಾನ್ಸ್ ಮಾಜಿ ನಿರ್ದೇಶಕ ಡಾ.ಸತೀಶ್‌ಚಂದ್ರ ಗಿರಿ, ಮಿಮ್ಸ್ ಪ್ರಾಂಶುಪಾಲ ಡಾ.ಪಿ.ಎಸ್.ತಮ್ಮಣ್ಣ, ವೈದ್ಯಕೀಯ ಅಧೀಕ್ಷಕ ಡಾ.ಪಿ.ವಿ.ಶ್ರೀಧರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net