ಗೋವುಗಳ ರಕ್ಷಣೆ ನಮ್ಮೆಲ್ಲರ ಹೊಣೆ

1 Dwd 8
Published on

ಧಾರವಾಡ: ಗೋವುಗಳ ಹಾಲು ಅಮೃತಕ್ಕೆ ಸಮಾನ. ಹಾಗಾಗಿ ಗೋವುಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು. ದೇಹಕ್ಕೆ ಅಗತ್ಯ ಪೋಷಕಾಂಶ ಪಡೆಯಲು ಮಕ್ಕಳು ನಿತ್ಯ ಹಾಲು ಕುಡಿಯಬೇಕು ಎಂದು ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ ಪ್ರಾಚಾರ್ಯೆ ಸಾಧನಾ ಎಸ್. ಹೇಳಿದರು.
ನಗರದ ವಿದ್ಯಾಗಿರಿ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್‌ನಲ್ಲಿ ಶನಿವಾರ ಆಯೋಜಿಸಿದ್ದ ವಿಶ್ವ ಕ್ಷೀರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಲಾ ಮಕ್ಕಳು ಗೋಪಾಲಕರ ವೇಷದಲ್ಲಿ ಭಾಗವಹಿಸಿ ಗಮನ ಸೆಳೆದರು. ಗೋವಿಗೆ ಅಕ್ಕಿ- ಬೆಲ್ಲ ತಿನ್ನಿಸಲಾಯಿತು. ಹಾಲಿನಿಂದ ತಯಾರಿಸಲ್ಪಡುವ ಉತ್ಪನ್ನಗಳ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿತ್ತು. ಮಕ್ಕಳಿಗೆ ಹಾಲಿನಲ್ಲಿರುವ ಪೌಷ್ಠಿಕಾಂಶಗಳ ಮಾಹಿತಿ ನೀಡಲಾಯಿತು. ಶ್ಯಾಮಲಾ ವಿ. ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net