ಜೆಎಸ್‌ಎಸ್‌ನಲ್ಲಿ ವಿಶ್ವ ಹಾಲು ದಿನಾಚರಣೆ

web 2
Published on

ಧಾರವಾಡ: ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸಿಬಿಎಸ್‌ಇ ಶಾಲೆಯಲ್ಲಿ ವಿಶ್ವ ಹಾಲು ದಿನವನ್ನು ಗುರುವಾರ ವಿಶೇಷವಾಗಿ ಆಚರಿಸಲಾಯಿತು.
ಶಾಲಾ ಆವರಣಕ್ಕೆ ಗೋವುಗಳನ್ನು ತಂದಿದ್ದು ವಿಶೇಷವಾಗಿತ್ತು. ಪ್ರಾಚಾರ್ಯೆ ಸಾಧನಾ ಎಸ್. ನೇತೃತ್ವದಲ್ಲಿ ಸಿಬ್ಬಂದಿ ಗೋವುಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಗೊವುಗಳ ಉಪಯೋಗ ಮತ್ತು ಮಹತ್ವ, ಗೋವಿನ ಹಾಲಿನಿಂದ ಮಕ್ಕಳಿಗೆ ಸಿಗುವ ಆರೋಗ್ಯದ ಬಗ್ಗೆ ಅರಿವು ಮೂಡಿಸಲಾಯಿತು. ಮಕ್ಕಳು ಹೈನುಗಾರರ ವೇಷಭೂಷಣದಲ್ಲಿ ಗಮನ ಸೆಳೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net