ವಿಶ್ವ ತಂಬಾಕು ರಹಿತ ದಿನಾಚರಣೆ

tobaco day
Published on

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಡಗು ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೆ.ಎಂ.ಸತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವ ಜನತೆ ತಂಬಾಕು ಎನ್ನುವ ವ್ಯಸನಕ್ಕೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ. ಅವರನ್ನು ಈ ವ್ಯಸನದಿಂದ ಮುಕ್ತರಾಗಲು ಜಾಗೃತಿ ಅಗತ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಅವರು, ತಂಬಾಕು ಸೇವನೆಯಿಂದ ಉಂಟಾಗುವ ದೈಹಿಕ ಮತ್ತು ಮಾನಸಿಕ ತೊಂದರೆಗಳ ಬಗ್ಗೆ ತಿಳಿಸಿದರು.

ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದ ದಂತ ವೈದ್ಯಧಿಕಾರಿ ಡಾ.ಅಮೂಲ್ಯ ಅವರು, ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎಲ್.ಶ್ರೀನಿವಾಸ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತ ಮಂಜುನಾಥ್, ಹಿರಿಯ ಸಿವಿಲ್ ನ್ಯಾಯಾಧೀಶರು, ಡೀನ್ ಹಾಗೂ ನಿರ್ದೇಶಕರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು, ದಂತ ವೈದ್ಯಾಧಿಕಾರಿಗಳು, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಸಿಬ್ಬಂದಿಗಳು, ಎಎನ್‌ಎಂಟಿಸಿ ನರ್ಸಿಂಗ್ ವಿದ್ಯಾರ್ಥಿಗಳು, ಪ್ರಯೋಗಶಾಲಾ ತಂತ್ರಾಜ್ಞರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net