

ವಿಜಯವಾಣಿ ಸುದ್ದಿಜಾಲ ಸುಳ್ಯ
ತಂಬಾಕು ಸೇವೆಯಿಂದ ಆರೋಗ್ಯ ಮತ್ತು ಸಮಾಜದ ಮೇಲೂ ದುಷ್ಪರಿಣಾಮ ಬೀರುತ್ತದೆ. ತಂಬಾಕು ಸೇವನೆ ಸೇವಿಸುವ ವ್ಯಕ್ತಿ ಮಾತ್ರವಲ್ಲದೆ ಇನ್ನೊಬ್ಬರ ಜೀವಕ್ಕೂ ಮಾರಕವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಕೆಲವು ಯುವಕ ಯುವತಿಯರು ಈ ಚಟಕ್ಕೆ ಬಲಿಯಾಗುತ್ತಿರುವುದು ವಿಷಾದ ಎಂದು ಸಿವಿಲ್ ನ್ಯಾಯಧೀಶೆ ಅರ್ಪಿತಾ ಹೇಳಿದರು.
ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಸುಳ್ಯ ಹಾಗೂ ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಸಂಯುಕ್ತ ಆಶ್ರಯದಲ್ಲಿ ಶನಿವಾರ ವಿಶ್ವ ತಂಬಾಕು ನಿಷೇಧ ದಿನ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ವಕೀಲ ಪ್ರದೀಪ್ ಬೆಳ್ಳೂರು ವಿಶ್ವ ತಂಬಾಕು ನಿಷೇಧದ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ವಕೀಲರ ಸಂಘದ ಅಧ್ಯಕ್ಷ ನಾರಾಯಣ ಕೆ., ಕೆಪಿಎಸ್ ಶಾಲೆಯ ಕಾರ್ಯಾಧ್ಯಕ್ಷ ಚಿದಾನಂದ ಕಾಯರ್ತೋಡಿ, ವಕೀಲ ರಾಜೇಶ್ ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಅಬ್ದುಲ್ ಸಮದ್ ಸ್ವಾಗತಿಸಿ ಪ್ರಸ್ತಾವನೆಗೈದರು. ಉಪಪ್ರಾಂಶುಪಾಲೆ ಜ್ಯೋತಿಲಕ್ಷ್ಮೀ ವಂದಿಸಿದರು.ಶಿಕ್ಷಕಿ ರಶ್ಮಿ ಕಾರ್ಯಕ್ರಮ ನಿರೂಪಿಸಿದರು.