ವಿಶ್ವ ತಂಬಾಕು ರಹಿತ ದಿನಾಚರಣೆ ಜಾಗೃತ ರ‌್ಯಾಲಿ

tobacco day
Published on

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ‌್ಯಾಲಿ ನಡೆಯಿತು.

ಕಾಲೇಜು ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಉಪಪ್ರಾಂಶುಪಾಲೆ ಡಾ.ಸುಜಾತಾ ದಿನೇಶ್, ಡೀನ್‌ಗಳಾದ ಡಾ.ಶಿವಪ್ರಸಾದ್ ಶೆಟ್ಟಿ, ಡಾ.ಗೀತಾ ಬಿ.ಶೆಟ್ಟಿ, ಡಾ.ಬಾಲಕೃಷ್ಣ ಶೆಟ್ಟಿ, ಉಪನ್ಯಾಸಕ ವೃಂದ, ಸಿಬ್ಬಂದಿ ವರ್ಗ ಹಾಗೂ ವೈದ್ಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬೆಳ್ತಂಗಡಿ ಪೊಲೀಸ್ ಇಲಾಖೆ ವೃತ್ತನಿರೀಕ್ಷಕರು ಸಹಕರಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ ಸಂಯೋಜಕ ಧರ್ಮೇಂದ್ರ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕರು, ಡಾ.ಮೇಘನಾ ಗೌಡ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net