ಅಪೌಷ್ಟಿಕತೆ ಹೋಗಲಾಡಿಸಲು ಉತ್ತಮ ಆಹಾರ ಸೇವಿಸಿ: ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಆನಂದ್ ಸಲಹೆ

World Nutrition Day Mandya
Published on

ಮಂಡ್ಯ: ಅಪೌಷ್ಟಿಕತೆ ಹೋಗಲಾಡಿಸಲು ಪೌಷ್ಟಿಕ ಅಂಶವಿರುವ ಮತ್ತು ಸಮತೋಲನ ಆರೋಗ್ಯ ಕಾಪಾಡಿಕೊಳ್ಳಲು ಉತ್ತಮ ಆಹಾರ ಸೇವನೆ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ್ ಸಲಹೆ ನೀಡಿದರು.

ನಗರದ ಮಂಡ್ಯ ಎಜುಕೇಷನ್ ಸೊಸೈಟಿಯಲ್ಲಿ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪಿಇಎಸ್ ಕಾನೂನು ಕಾಲೇಜು ಮತ್ತು ಕಾನೂನು ಸೇವಾ ಘಟಕದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪೌಷ್ಟಿಕಾಂಶ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡಬೇಕು. ದೇಹಕ್ಕೆ ಪೌಷ್ಟಿಕ ಆಹಾರ ಮುಖ್ಯವಾಗಿದೆ ಎನ್ನುವುದನ್ನು ಯಾರೂ ಮರೆಯಬಾರದು. ದೇಹಕ್ಕೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಮುಖ್ಯವಾಗಿದೆ. ಹಾಗಾಗಿ ಸಮತೋಲನ ಆಹಾರ ಸೇವನೆ ಮಾಡಿದರೆ ಮಾತ್ರ ಸಮತೋಲನ ಜೀವನ ಕಾಪಾಡಿಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ಇತ್ತೀಚೆಗೆ ಉತ್ತಮ ಆಹಾರ ಸೇವನೆ ಮಾಡುವುದನ್ನು ಬಿಟ್ಟಿದ್ದೇವೆ ಎನ್ನುವ ಭಾವನೆ ಮೂಡಿದೆ, ಅದು ಆಗಬಾರದು. ಎಲ್ಲರೂ ಪೌಷ್ಟಿಕ ಆಹಾರ ಸೇವನೆ ಮಾಡಬೇಕು ಎಂದು ಸಲಹೆ ನೀಡಿದರು.

ಮಿಮ್ಸ್ ಸಹ ಪ್ರಾಧ್ಯಾಪಕ ಡಾ.ಸುಭಾಷ್ ಬಾಬು ಮಾತನಾಡಿ, ಹದಿಹರೆಯದ ಮಕ್ಕಳಲ್ಲಿ ಕಬ್ಬಿಣಾಂಶದ ಕೊರತೆ ಕಂಡು ಬರುತ್ತಿದೆ. ಹಾಗಾಗಿ ಮಕ್ಕಳು ಓದುವ ಒತ್ತಡದಲ್ಲಿ ಸರಿಯಾದ ಆಹಾರ ಕ್ರಮ ಅನುಸರಿಸದೇ ಇರುವುದು ಇದಕ್ಕೆ ಕಾರಣವಾಗಿರಬಹುದು. ಆಕರ್ಷಕ ಜಾಹೀರಾತಿನಲ್ಲಿ ಬರುವ ಜಂಕ್ಸ್‌ಫುಡ್‌ಗೆ ಕೆಲವು ಮಕ್ಕಳು ಅಡಿಟ್ ಆಗಿದ್ದಾರೆ. ಇದರಿಂದ ಅವರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಇದನ್ನು ತಪ್ಪಿಸಬೇಕೆಂದರೆ ಮನೆಯಲ್ಲಿಯೆ ಆರೋಗ್ಯ ಪೂರ್ಣ ಆಹಾರ ನೀಡುವ ಮೂಲಕ ಮಕ್ಕಳಿಗೆ ಅಭ್ಯಾಸ ಮಾಡಿಸಿದರೆ ಒಳ್ಳೆದು ಎಂದು ಸಲಹೆ ನೀಡಿದರು.

ಮಂಡ್ಯ ಎಜುಕೇಷನ್ ಸೊಸೈಟಿ ಅಧ್ಯಕ್ಷ ಪಳನಿ, ಕಾರ್ಯದರ್ಶಿ ಎಂ.ವಿ.ಧರಣೇಂದ್ರಯ್ಯ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸುಮಿತ್ರಾ ತಿಮ್ಮೇಶ್, ಕಾನೂನು ಸಹಾಯಕ ಪ್ರಾಧ್ಯಾಪಕ ಕೆ.ಎಸ್.ಜಯಕುಮಾರ್ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net