

ಹಾಸನ: ಪಶುಸಂಗೋಪನೆ ಮತ್ತು ಪಶುವೈದ್ಯ ಸೇವೆಗಳ ಇಲಾಖೆ ಹಾಗೂ ಹಾಸನ ಹಾಲು ಒಕ್ಕೂಟ ಸಹಯೋಗದಲ್ಲಿ ಭಾನುವಾರ ಹಾಸನ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿಶ್ವ ರೇಬಿಸ್ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಅಭಿಯಾನದ ಅಂಗವಾಗಿ, ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸುಮಾರು 48 ನಾಯಿಗಳು ಮತ್ತು 18 ಬೆಕ್ಕುಗಳಿಗೆ ರೇಬಿಸ್ ಲಸಿಕೆ ನೀಡಲಾಯಿತು. ಅಲೆಮಾರಿ ಪ್ರಾಣಿಗಳಿಗೆ ಲಸಿಕಾ ಅಭಿಯಾನವನ್ನು 2025ರ ಸೆಪ್ಟೆಂಬರ್ 29ರಂದು ಅಧಿಕೃತವಾಗಿ ಪ್ರಾರಂಭಿಸಲಾಗಿದ್ದು, ಒಂದು ವಾರದವರೆಗೆ ಹಾಸನ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಲೆಮಾರಿ ನಾಯಿಗಳಿಗೆ ಲಸಿಕೆ ನೀಡಲಾಗುತ್ತದೆ.
ಕಾರ್ಯಕ್ರಮದಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯದ ಶಿಕ್ಷಕ ಡಾ.ಓ.ಆರ್. ನಟರಾಜು, ಪಶುಸಂಗೋಪನೆ ಮತ್ತು ಪಶುವೈದ್ಯ ಸೇವೆಗಳ ಇಲಾಖೆಯ ಉಪನಿರ್ದೇಶಕ ಡಾ.ರಾಮೇಶ್, ಸಿವಿಒ (ಆಡ್ಮಿನ್) ಡಾ.ತಾರಾನಾಥ್ ಇದ್ದರು.