

ಕಾರವಾರ: ಜಿಲ್ಲೆ ಶಾಂತವಾಗಿರಲು, ವಿವಿಧ ಕಾರ್ಯ ಚಟುವಟಿಕೆಗಳು ಸಮರ್ಪಕವಾಗಿ ನಡೆಯಲು ಹಿರಿಯ ನಾಗರಿಕರು ಕಾರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ಜಿಲ್ಲಾ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಕಾರವಾರದ ನಿವೃತ್ತ ನೌಕರರ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಿಮ್ಮ ಅನುಭವ ನಿನ್ನೆಯ ಆಗು ಹೋಗುಗಳ ಜತೆಗೆ ಮುಂದಿನ ಕಾರ್ಯಕ್ಕೂ ಮಾರ್ಗಸೂಚಿಯಾಗಲಿದೆ. ಹಿರಿಯ ಮಾಗರಿಕರ ಸಮಸ್ಯೆಗಳನ್ನು ಬಗೆಹರಿಸಲು ಬದ್ಧ ಎಂದರು.
ಹಿರಿಯ ನಾಗರಿಕರ ಕಲ್ಯಾಣ ಅಧಿಕಾರಿ ರಾಘವೇಂದ್ರ ಭಟ್ಟ ಸ್ವಾಗತಿಸಿದರು. ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ವಿ.ಎಂ.ಹೆಗಡೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ವಿರೂಪಾಕ್ಷ ಪಾಟೀಲ ಇದ್ದರು. ಜಿಲ್ಲಾ ಮಟ್ಟದ ಹಿರಿಯ ನಾಗರಿಕರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಹಿರಿಯ ನಾಗರಿಕರ ಸಹಾಯವಾಣಿ ಆರಂಭ
ಮೂರು ವರ್ಷಗಳ ಹಿಂದೆ ಬಂದ್ ಆಗಿದ್ದ ಹಿರಿಯ ನಾಗರಿಕರ ಸಹಾಯವಾಣಿಯನ್ನು ಮರು ಪ್ರಾರಂಭಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಂಗಳವಾರ ಹಿರಿಯ ನಾಗರಿಕರ ಸಹಾಯವಾಣಿಯನ್ನು ಉದ್ಘಾಟಿಸಿದರು. ಎಸ್ ಪಿ ಕಚೇರಿಯಲ್ಲಿ ಹಿರಿಯ ನಾಗರಿಕರ ಸಹಾಯವಾಣಿ 1090 ಕಾರ್ಯ ನಿರ್ವಹಿಸಲಿದೆ.ಅವರ ಸಮಸ್ಯೆಗಳಿಗೆ ಸ್ಪಂದಿಸಲಿದೆ. ಈ ಹಿಂದೆ ವಿಜಯವಾಣಿ ಸಹಾಯವಾಣಿ ಬಂದ್ ಆಗಿರುವ ಬಗ್ಗೆ ವಿಶೇಷ ವರದಿಗಳನ್ನು ಪ್ರಕಟಿಸಿತ್ತು.