ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ

ಅರಕಲಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮವನ್ನು ನ್ಯಾಯಾಧೀಶ ಬಿ.ಕೆ. ನಾಗೇಶ್ ಮೂರ್ತಿ ಉದ್ಘಾಟಿಸಿದರು. ಬಿ.ಕೆ.ಶ್ರೀಧರ್, ಮಹೇಶ್, ಶಂಕರಯ್ಯ ಇದ್ದರು.
ಅರಕಲಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ನಡೆದ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮವನ್ನು ನ್ಯಾಯಾಧೀಶ ಬಿ.ಕೆ. ನಾಗೇಶ್ ಮೂರ್ತಿ ಉದ್ಘಾಟಿಸಿದರು. ಬಿ.ಕೆ.ಶ್ರೀಧರ್, ಮಹೇಶ್, ಶಂಕರಯ್ಯ ಇದ್ದರು.
Published on

ಅರಕಲಗೂಡು: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದಿಂದ ಗುರುವಾರ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಆಚರಿಸಲಾಯಿತು.

ಜೆಎಂಎಫ್‌ಸಿ ನ್ಯಾಯಾಧೀಶ ಬಿ.ಕೆ.ನಾಗೇಶ್ ಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದ ಸಂವಿಧಾನದಲ್ಲಿ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಲಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿ ಕೆ.ಆರ್. ಶ್ರೀಧರ್ ಮಾತನಾಡಿ, ಸಾಮಾಜಿಕ ನ್ಯಾಯ ಅನುಷ್ಠಾನಗೊಳಿಸಲು ಹಲವು ಮಾರ್ಗಗಳಿದ್ದು ಅದರಲ್ಲಿ ಸಂಪನ್ಮೂಲದ ಹಂಚಿಕೆ ಹಾಗೂ ಸ್ಥಾನಮಾನ ನೀಡುವಾಗ ರಾಜಕೀಯ ಭಾಗವಹಿಸುವಿಕೆಯಲ್ಲಿ ಸಮಾನ ಅವಕಾಶ ಕಲ್ಪಿಸಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಎಂ. ಮಹೇಶ ಮಾತನಾಡಿ, ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸಲು ವಿಶ್ವಗುರು ಬಸವಣ್ಣ 12ನೇ ಶತಮಾನದಲ್ಲೇ ಪ್ರಯತ್ನಿಸಿದ್ದರು. ನಂತರ ಗಾಂಧೀಜಿ ರಾಷ್ಟ್ರೀಯ ಹೋರಾಟದ ಸಂದರ್ಭದಲ್ಲಿ ಮತ್ತು ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿದರು. ಸ್ವತಂತ್ರ ಭಾರತದಲ್ಲಿ ಸಂವಿಧಾನ ಸಾಮಾಜಿಕ ನ್ಯಾಯಕ್ಕೆ ಅವಕಾಶ ನೀಡಿದೆ. ರಾಜ್ಯ ನಿರ್ದೇಶಕ ತತ್ವಗಳು ಇರುವುದು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸಲು ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಪ್ರಶಾಂತ್ ಕುಮಾರ್, ವಕೀಲರು, ಉಪನ್ಯಾಸಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net