

ವಿರಾಜಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವಿರಾಜಪೇಟೆ ವಲಯದವತಿಯಿಂದ ಗುರುವಾರ ಬಿಟ್ಟಂಗಾಲ ಕಾರ್ಯಕ್ಷೇತ್ರದ ತ್ರೈಮಾಸಿಕ ಒಕ್ಕೂಟದ ಸಭೆಯಲ್ಲಿ ವಿಶ್ವ ತಂಬಾಕು ವಿರೋಧಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಸಂಗೀತಾ ಮಾತನಾಡಿ, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ತಾಲೂಕು ನೋಡೆಲ್ ಅಧಿಕಾರಿ ಸಂಗೀತಾ, ಬಿಟ್ಟಂಗಾಲ ಕಾರ್ಯಕ್ಷೇತ್ರ ಒಕ್ಕೂಟದ ಅಧ್ಯಕ್ಷ ಪಿ.ಸಿ.ರಂಜನ್ ತಂಬಾಕು ಸೇವನೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಇತರರು ಇದ್ದರು.