ವಿಶ್ವ ಪ್ರವಾಸೋದ್ಯಮ ದಿನ 27ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಹಾಗೂ ಧಾರವಾಡ ಪ್ರೆಸ್ಟೀಜ್​ ಇನ್​ಸ್ಟಿಟ್ಯೂಟ್​ ಆಫ್ ಹೋಟೆಲ್​ ಮ್ಯಾನೇಜ್​ಮೆಂಟ್​ ಸಹಯೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸೆ. 27ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಎಚ್​.ಕೆ.ಪಾಟೀಲ, ವಿಧಾನ ಪರಿಷತ್​ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರಾದ ವಿನಯ ಕುಲಕರ್ಣಿ, ಅಬ್ಬಯ್ಯ ಪ್ರಸಾದ, ಎನ್​.ಎಚ್​ ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್​. ಪಾಟೀಲ, ಭರಮಗೌಡ ಅಲಗೌಡ ಕಾಗೆ, ಜೆ.ಎನ್​.ಗಣೇಶ, ಎಸ್​.ವಿ.ಸಂಕನೂರ, ಪ್ರದಿಪ ಶೆಟ್ಟರ, ಜಿಲ್ಲಾಧಿಕಾರಿ ದಿವ್ಯ ಪ್ರಭು, ನಿಗಮ ಮಂಡಳಿ ಅಧ್ಯಕ್ಷರು, ಅತಿಥಿಗಳಾಗಿ ಭಾಗವಹಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net