ಎಲ್ಲ ಮಕ್ಕಳ ಆರೋಗ್ಯ ರಕ್ಷಣೆಗೆ ಮುಂದಾಗಿ...

Lasika
Published on

ಅಪರ ಜಿಲ್ಲಾಧಿಕಾರಿ ಅಬೀದ ಗದ್ಯಾಳ ಕರೆ

ಜಿಲ್ಲಾ ಮಟ್ಟದ ವಿಶ್ವ ಲಸಿಕಾ ವಾರ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು, ಮಾರಕ ರೋಗಗಳಿಂದ ರಕ್ಷಿಸಲು ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಬೇಕು. ತನ್ಮೂಲಕ ಅವರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ ಗದ್ಯಾಳ ಕರೆ ನೀಡಿದರು.

ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರಾಷ್ಟ್ರೀಯ ಆರೋಗ್ಯ ಅಭಿಯಾನ ಆಶ್ರಯದಲ್ಲಿ ಏ.24ರಂದು ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಶ್ವ ಲಸಿಕಾ ವಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ

ಇದುವರೆಗೂ ಒಂದೂ ಲಸಿಕೆ ಪಡೆಯದ ಮಕ್ಕಳು, ದಡಾರ-ರುಬೆಲ್ಲಾ ಲಸಿಕೆ ವಂಚಿತ ಮಕ್ಕಳಿಗೆ ಲಸಿಕಾ ಸಪ್ತಾಹದ ಪ್ರಯೋಜನ ಸಿಗುವಂತಾಗಬೇಕು. ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರ ಮಕ್ಕಳನ್ನೂ ಗುರುತಿಸಿ ಯಾವ ಮಗುವೂ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಜಿ. ಹುಬ್ಬಳಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರ್​ಸಿಎಚ್​ ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಾತ್ವಿಕ್​, ಆರೋಗ್ಯ ಇಲಾಖೆಯ ಸಿಬ್ಬಂದಿ, ಮಕ್ಕಳು ಮತ್ತು ಪಾಲಕರು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ ಎಚ್​. ಕಾರ್ಯಕ್ರಮ ನಿರೂಪಿಸಿದರು. ಆರೋಗ್ಯ ನಿರೀಕ್ಷಣಾ ಹಿರಿಯ ಅಧಿಕಾರಿ ಸತೀಶ ರಾವ್​ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net