ಕಡಿಮೆ ನೀರಿನ ಬೆಳೆ ಪದ್ಧತಿ ಅಳವಡಿಸಿಕೊಳ್ಳಿ

26 Dwd 8
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ರೈತರು ಸಾಂಪ್ರದಾಯಿಕ ಕೃಷಿ ಪದ್ಧತಿಯ ಬದಲು ವೈಜ್ಞಾನಿಕ ಚಿಂತನೆಯ ಮೂಲಕ ಕಡಿಮೆ ನೀರಿನ ಬೆಳೆ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು. ಸಾವಯವ ಕೃಷಿಯ ಮೂಲಕ ಮಣ್ಣಿನ ಜೈವಿಕ ಗುಣಧರ್ಮವನ್ನು ಉಳಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.

ಧಾರವಾಡ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆಯಲ್ಲಿ (ವಾಲ್ಮಿ) ಮಂಗಳವಾರ ಆಯೋಜಿಸಿದ್ದ ವಿಶ್ವ ಜಲ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ವ ಜಲ ದಿನಾಚರಣೆಯ ಉದ್ದೇಶ ನೀರಿನ ಮಹತ್ವ, ನೈಸರ್ಗಿಸ ಸಂಪನ್ಮೂಲಗಳ ಸಂರಕ್ಷಣೆ, ಮಾಲಿನ್ಯ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವುದಾಗಿದೆ. ರೈತರು ಗ್ರಾಹಕ ರಕ್ಷಣಾ ಆಯೋಗದ ಪ್ರಯೋಜನ ಪಡೆದುಕೊಳ್ಳಬೇಕು. ಬೀಜ, ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ಉತ್ಪಾದಕರು ಮತ್ತು ಮಾರಾಟಗಾರರಿಂದ ನಷ್ಟವಾಗಿದ್ದರೆ ಕಾನೂನು ನೆರವು ಪಡೆದುಕೊಳ್ಳಬೇಕು ಎಂದರು.

ವಾಲ್ಮಿ ನಿರ್ದೇಶಕ ಬಿ.ವೈ. ಬಂಡಿವಡ್ಡರ ಅಧ್ಯಕ್ಷತೆ ವಹಿಸಿದ್ದರು. ಧಾರವಾಡ ನೇಚರ್ ಫಸ್ಟ್ ಇಕೋ ವಿಲೇಜ್‌ನ ಪಿ.ವಿ. ಹಿರೇಮಠ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಮಹತ್ವ ವಿವರಿಸಿದರು.

ಪ್ರಗತಿಪರ ರೈತರಾದ ಜಮಖಂಡಿಯ ಪುಲಕೇಶಿ ಸುರೇಂದ್ರ ನಾಂದ್ರೇಕರ, ದಾವಣಗೆರೆಯ ಎಚ್.ಬಿ. ಸತೀಶ, ಡಿ. ನಿಂಗಪ್ಪ ಅವರನ್ನು ಸನ್ಮಾನಿಸಲಾಯಿತು.

ರೈತರು, ವಿದ್ಯಾರ್ಥಿಗಳು, ಕರ್ನಾಟಕ ನೀರಾವರಿ ನಿಗಮದ ಅಽಕಾರಿ, ಸಿಬ್ಬಂದಿ ಮತ್ತು ವಾಲ್ಮಿ ಸಂಸ್ಥೆಯ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net