ಪಿಇಎಸ್ ಕಾಲೇಜಿನಲ್ಲಿ ವಿಶ್ವ ಜಲ ದಿನಾಚರಣೆ: ನಾಟಕ ಪ್ರದರ್ಶಿಸಿ ವಿದ್ಯಾರ್ಥಿಗಳಿಂದ ಜಾಗೃತಿ

World Water Day Celebration at PES College Mandya
Published on

ಮಂಡ್ಯ: ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ಶಾಂತಿಗಾಗಿ ಜಲ ಎಂಬ ವಿಷಯದ ಬಗ್ಗೆ ಶುಕ್ರವಾರ ಜಾಗೃತಿ ಕಾರ್ಯಕ್ರಮ ಏರ್ಪಡಿಸಿತು.

ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಲಸಂರಕ್ಷಣೆಯ ಮಹತ್ವ, ಜಾಗತಿಕ ಸಾಮರಸ್ಯ ಮತ್ತು ಪರಿಸರ ಸುಸ್ಥಿರತೆಯನ್ನು ಉತ್ತೇಜಿಸುವ ಕುರಿತು ಜಾಗೃತಿ ಮೂಡಿಸಲಾಯಿತು. ವಿಭಾಗದ ಮುಖ್ಯಸ್ಥ ಡಾ.ಎಚ್.ಡಿ. ಚೌಡೇಗೌಡ, ಪ್ರಸ್ತುತ ಮತ್ತು ಮುಂದಿನ ಪೀಳಿಗೆಯ ನೀರಿನ ಸಂಪನ್ಮೂಲಗಳ ಸಂರಕ್ಷಣೆಯಲ್ಲಿ ಜವಾಬ್ದಾರಿಯುತ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದರು. ಇದೇ ವೇಳೆ ವಿದ್ಯಾರ್ಥಿಗಳು ನಾಟಕವನ್ನು ಪ್ರದರ್ಶಿಸಿದರು.

ಪಿಇಟಿ ಟ್ರಸ್ಟಿ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್, ಪ್ರಾಂಶುಪಾಲ ಡಾ.ಎಚ್.ಎಂ.ನಂಜುಡಸ್ವಾಮಿ, ಉಪ ಪ್ರಾಂಶುಪಾಲ ಡಾ.ಎಸ್.ವಿನಯ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net