ಕಾರ್ಮಿಕರ ರಕ್ಷಣೆಗೆ ಸರ್ಕಾರ ಬದ್ಧ: ಶಾಸಕ ರವಿಕುಮಾರ್ ಗಣಿಗ ಭರವಸೆ

World Workers Day Mandya
Published on

ಮಂಡ್ಯ: ಎಲ್ಲ ರೀತಿಯ ಕಾರ್ಮಿಕರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕೆ ಪೂರಕವಾಗಿ ಹಲವು ಸೌಲಭ್ಯ ಕಲ್ಪಿಸಿದೆ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಮಿಮ್ಸ್) ಆವರಣದಲ್ಲಿ ನಾನ್ ಕ್ಲಿನಿಕಲ್ ನೌಕರರೊಂದಿಗೆ ವಿಶ್ವ ಕಾರ್ಮಿಕರ ದಿನವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿ ಮಾತನಾಡಿದ ಅವರು, ಕಾರ್ಮಿಕರಿಗೆ ವೇತನ, ವಸತಿ ಸೇರಿದಂತೆ ಹಲವು ಸೌಲಭ್ಯ ಸರ್ಕಾರ ನೀಡಿದೆ ಎಂದರು.

ರಾಜ್ಯ ಸರ್ಕಾರ ಎಂದಿಗೂ ಕಾರ್ಮಿಕರ ಪರವಾಗಿದೆ. ಅವರ ಕಷ್ಟ-ಸುಖಗಳಲ್ಲಿ ಭಾಗಿಯಾಗಿದೆ. ನಮ್ಮ ಪಕ್ಷ ಚುನಾವಣೆಯ ಸಂದರ್ಭದಲ್ಲಿ ಪೌರ ಕಾರ್ಮಿಕರನ್ನು ಖಾಯಂ ಮಾಡುವುದಾಗಿ ಮಾತು ಕೊಟ್ಟಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 12,600 ಪೌರ ಕಾರ್ಮಿಕರನ್ನು ಖಾಯಂ ಆಗಿ ನೇಮಕ ಮಾಡಿ ಆದೇಶ ಮಾಡಿದ್ದಾರೆ. ಇದರೊಂದಿಗೆ ನುಡಿದಂತೆ ನಡೆದಿದ್ದೇವೆ. ಅಂತೆಯೇ ಹೊರಗುತ್ತಿಗೆ ಕಾರ್ಮಿರನ್ನು ಹಂತ ಹಂತವಾಗಿ ನೇರ ಪಾವತಿಯಡಿ ತರಲಾಗುವುದು ಎಂದು ಭರವಸೆ ನೀಡಿದರು.

ಮಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶಿವಕುಮಾರ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಲಹಳ್ಳಿ ಅಶೋಕ್, ಕಾಂಗ್ರೆಸ್ ಮುಖಂಡರಾದ ಧನಂಜಯ, ಯೋಗೇಶ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ಕರುನಾಡು ಸೇವಕರು ಸಂಘಟನೆಯ ನಾಗಣ್ಣಗೌಡ, ಚಂದ್ರು ಇತರರಿದ್ದರು. ಇದೇ ಸಂದರ್ಭದಲ್ಲಿ ನಾನ್ ಕ್ಲಿನಿಕಲ್ ನೌಕರರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net