ಕಾಳಿಕಾಂಬ ಕಮಟೇಶ್ವರಸ್ವಾಮಿ ದೇಗುಲದಲ್ಲಿ ಆರಾಧನೆ

24-JULY-GPT-2
ಗುಂಡ್ಲುಪೇಟೆ ಪಟ್ಟಣದ ಶ್ರೀ ಕಾಳಿಕಾಂಬಾ ಕಮಠೇಶ್ವರಸ್ವಾಮಿಯವರ ಉತ್ಸವ ಮೂರ್ತಿಯನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
Published on

ಗುಂಡ್ಲುಪೇಟೆ: ಪಟ್ಟಣದ ಶ್ರೀ ಕಾಳಿಕಾಂಬ ಕಮಟೇಶ್ವರಸ್ವಾಮಿ ದೇವಾಲಯದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಲಾಯಿತು.

ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಾಲಯವನ್ನು ವಿದ್ಯುತ್ ದೀಪ ಹಾಗೂ ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ನಂತರ ದೇವಿಯ ಉತ್ಸವ ಮೂರ್ತಿಯನ್ನು ಮಂಗಳವಾದ್ಯ ವೀರಗಾಸೆ ಸೇರಿದಂತೆ ಜನಪದ ಕಲಾಮೇಳಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ದೇವಾಲಯದಲ್ಲಿ ಸಹಸ್ರಾರು ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ವಿಶ್ವಕರ್ಮ ಜನಾಂಗದ ಮುಖಂಡರು, ಯುವಕರು ಪದಾಧಿಕಾರಿಗಳು ಹಾಗೂ ಮಹಿಳೆಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net