ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ

AUG. 8, HNP... PH.1.
ಹೊಳೆನರಸೀಪುರ ಪಟ್ಟಣದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತದ ಪ್ರಯುಕ್ತ ಅಭಿಷೇಕ ಹಾಗೂ ವಿಶೇಷ ಪೂಜಾ ಮಹೋತ್ಸವ ವೈಭವದಿಂದ ನಡೆಯಿತು.
Published on

ಹೊಳೆನರಸೀಪುರ : ಪಟ್ಟಣದ ಐತಿಹಾಸಿಕ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತದ ಪ್ರಯುಕ್ತ ವಿಶೇಷ ಪೂಜಾ ಮಹೋತ್ಸವ ನಡೆಯಿತು.

ಶುಕ್ರವಾರ ಮುಂಜಾನೆ ಬ್ರಾಹ್ಮಿ ಮುಹೂರ್ತದ ಉತ್ತರಾಷಾಢ ನಕ್ಷತ್ರದಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ಮೂಲ ಮೂರ್ತಿಯ ಜತೆಗೆ ದೇವಾಲಯದ ಆವರಣದಲ್ಲಿ ಇರುವ ಶ್ರೀ ಲಕ್ಷ್ಮೀ ದೇವಿಯ ಮೂಲ ವಿಗ್ರಹಕ್ಕೆ ಪುಣ್ಯಾಹ, ಪಂಚಾಮೃತ ಅಭಿಷೇಕ ನೆರವೇರಿಸಿ ವಿಶೇಷವಾಗಿ ಅಲಂಕರಿಸಲಾಯಿತು. ಆರಾಧನೆ ಸೇವೆ, ನೈವೇದ್ಯ, ಸಹಸ್ರ ನಾಮಾರ್ಚನೆ, ಅರ್ಚನೆ, ಮಂಗಳಾರತಿ ನೆರವೇರಿಸಿ, ತೀರ್ಥಪ್ರಸಾದ ವಿನಿಯೋಗ ಮಾಡಲಾಯಿತು. ಬಳಿಕ ಗೋಧಳಿ ಲಗ್ನದಲ್ಲಿ ಶ್ರೀದೇವಿಯ ಮೂರ್ತಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದ ನಂತರ ಲಲಿತ ಸಹಸ್ರನಾಮ ಪಠಣ, ನೈವೇದ್ಯ, ಮಹಾಮಂಗಳಾರತಿ ನೆರವೇರಿಸಿ, ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಅರ್ಚಕರಾದ ನಾರಾಯಣ ಭಟ್ಟರು, ರಾಮಪ್ರಸಾದ್ ಭಟ್ಟರು ಹಾಗೂ ವಿಜಯಕುಮಾರ್ ಪೂಜಾ ಕೈಂಕರ್ಯ ನೆರವೇರಿಸಿದರು.

ಪಟ್ಟಣದಲ್ಲಿ ಸುಮಂಗಲಿಯರು ಮನೆಗಳಲ್ಲಿ ವರಮಹಾಲಕ್ಷ್ಮೀ ವೃತದ ಪ್ರಯುಕ್ತ ಶ್ರೀದೇವಿಯ ಆರಾಧನೆಗಾಗಿ ಹಿರಿಯರ ಮಾರ್ಗದರ್ಶನದಂತೆ ಕಲಶ ಪ್ರತಿಷ್ಠಾಪಿಸಿ, ಶ್ರೀದೇವಿಯ ಮುಖವಾಡದಿಂದ ವಿಶೇಷವಾಗಿ ಅಲಂಕರಿಸಿ, ಪೂಜಾ ಕೈಂಕರ್ಯ ನೆರವೇರಿಸಿದ ನಂತರ ಅಕ್ಕಪಕ್ಕದ ಮನೆಯ ಮಹಿಳೆಯರನ್ನು ಅರಿಶಿನ ಕುಂಕುಮಕ್ಕೆ ಆಹ್ವಾನಿಸಿ, ಸತ್ಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net