

ಮದ್ದೂರು: ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ಸನ್ನಿಧಿಯಲ್ಲಿ ಉಡುಪಿಯ ಪುತ್ತಿಗೆ ಮಠದ ಕಿರಿಯ ಶ್ರೀಗಳಾದ ಸುಶ್ರೀಂದ್ರ ತೀರ್ಥ ಶ್ರೀಪಾದರು ಸೋಮವಾರ ವಿಶೇಷ ಪೂಜೆ ಸಲ್ಲಿಸಿದರು.
ಇದೇ ವೇಳೆ ಶ್ರೀಗಳನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ನಂತರ ದೇವರ ದರ್ಶನ ಪಡೆದ ಶ್ರೀಗಳು ದೇವರಿಗೆ ಮಹಾಮಂಗಳಾರತಿ ನೆರವೇರಿಸಿದರು.
ಇದೇ ವೇಳೆ ಗುರುಗಳಿಗೆ ಪಾದಪೂಜೆ ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರರಾವ್, ಶಂಕರ ಸಭಾ ಅಧ್ಯಕ್ಷ ಗುರುಸ್ವಾಮಿ, ಸತ್ಯನಾರಾಯಣರಾವ್, ಸುರೇಶ್ ಇದ್ದರು.