

ವಿರಾಜಪೇಟೆ: ನಗರದ ಚಿಕ್ಕಪೇಟೆ ಛತ್ರಕೆರೆ ಬಳಿಯಿರುವ ಶ್ರೀ ವೀರಾಂಜನೇಯಸ್ವಾಮಿ ದೇಗುಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವ ಬುಧವಾರ ಶ್ರದ್ಧಾಭಕ್ತಿಯಿಂದ ಜರುಗಿತು.
ಮುಂಜಾನೆಯೇ ಸ್ವಾಮಿಗೆ ಅಭಿಷೇಕ ಪೂಜೆ ನೆರವೇರಿದ ನಂತರ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಬಳಿಕ ಮಹಿಳಾ ಭಜನಾ ಮಂಡಳಿ ಸದಸ್ಯರಿಂದ ರಾಘವೇಂದ್ರ ಸ್ವಾಮಿಗಳ ಕುರಿತ ಭಜನೆಗಳು ಮೂಡಿ ಬಂತು. ಮಧ್ಯಾಹ್ನ ಶ್ರೀ ಸ್ವಾಮಿಗೆ ಮಹಾಪೂಜೆ, ಮಾಹಾಮಂಗಳಾರತಿ ಸಲ್ಲಿಸಲಾಯಿತು. ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು. ಮಹೋತ್ಸವಕ್ಕೆ ಆಗಮಿಸಿದ್ದ ಭಕ್ತರಿಗೆ ಆಡಳಿತ ಮಂಡಳಿ ವತಿಯಿಂದ ಅನ್ನಸಂತರ್ಪಣೆ ಮಾಡಲಾಯಿತು.
ವೀರಾಂಜನೇಯ ದೇಗುಲದ ಪ್ರಧಾನ ಅರ್ಚಕರು,ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು, ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಭಕ್ತರು ಸ್ವಾಮಿಯ ದರ್ಶನ ಪಡೆದು ಪುನಿತರಾದರು.