ತುಂಗಭದ್ರಾ ನದಿಯಲ್ಲಿ ದುರ್ಗಾದೇವಿಗೆ ಪೂಜೆ

5MDG4 pallakki
Published on

ಮುಂಡರಗಿ: ಪಟ್ಟಣದ ಕೋಟೆ ಭಾಗದ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮೂರನೇ ಮಂಗಳವಾರದ ನಿಮಿತ್ತ ದೇವಿಯ ಪಲ್ಲಕ್ಕಿ ಉತ್ಸವದ ಮೂಲಕ ನದಿಗೆ ತೆರಳಿ ಪೂಜೆ ಸಲ್ಲಿಸುವ ಕಾರ್ಯಕ್ರಮ ಜರುಗಿತು.

ದೇವಸ್ಥಾನದಲ್ಲಿ ಬೆಳಗ್ಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಭಕ್ತರು ದುರ್ಗಾದೇವಿ ದರ್ಶನ ಪಡೆದು ಕೃತಾರ್ಥರಾದರು.

ಸಕಲ ವಾದ್ಯಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ದುರ್ಗಾದೇವಿ ಪಲ್ಲಕ್ಕಿ ಉತ್ಸವ ಸಂಚರಿಸಿ ನಾಗರಹಳ್ಳಿ ಗ್ರಾಮದ ಬಳಿಯ ತುಂಗಭದ್ರಾ ನದಿಗೆ ತೆರಳಿ ದೇವಿಗೆ ಹಾಗೂ ತುಂಗಭದ್ರಾ ನದಿಗೆ ಪೂಜೆ ಸಲ್ಲಿಸಲಾಯಿತು. ನಂತರ ಅಲ್ಲೇ ಭಕ್ತರು ಪ್ರಸಾದ ಸ್ವೀಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net