ರಾಯರ ಮಠದಲ್ಲಿ ಜಯತೀರ್ಥರ ಆರಾಧನೆ

D7-BDVT1
ಭದ್ರಾವತಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಜಯತೀರ್ಥರ ಆರಾಧನೆ ನಡೆಯಿತು.
Published on

ಭದ್ರಾವತಿ: ಇಲ್ಲಿನ ಹಳೇನಗರ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶುಕ್ರವಾರ ಜಯತೀರ್ಥರ ಆರಾಧನೆ ಶಾಸ್ತ್ರೋಕ್ತವಾಗಿ ನೆರವೇರಿತು.

ಬೆಳಗ್ಗೆ ಪಂಚಾಮೃತ ಅಭಿಷೇಕ, ಪ್ರಾಕಾರದ ಒಳಗಡೆ ರಥೋತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಿದವು. ಶಿವಮೊಗ್ಗ ಶ್ರೀನಿಧಿ ಗುಡಿ ಅವರು ಜಯತೀರ್ಥರ ಕುರಿತು ಉಪನ್ಯಾಸ ನೀಡಿದರು. ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನೆರವೇರಿತು.
ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳಿಧರ ತಂತ್ರಿ, ಉಪಾಧ್ಯಕ್ಷೆ ಸುಮಾ ರಾಘವೇಂದ್ರ ತಂತ್ರಿ, ಪ್ರಧಾನ ಕಾರ್ಯದರ್ಶಿ ಜಿ.ರಮಾಕಾಂತ್, ನಿರಂಜನಾಚಾರ್ಯ, ಮಧುರಾ, ಜಯತೀರ್ಥ, ಗೋಪಾಲಕೃಷ್ಣ ಆಚಾರ್, ಶ್ರೀನಿವಾಸ ಆಚಾರ್, ಶುಭಾ ಗುರುರಾಜ್, ಸುಪ್ರೀತಾ ತಂತ್ರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net