ಮಳೆಗಾಗಿ ಪ್ರಾರ್ಥಿಸಿ ಕಾಡು ಬಸವೇಶ್ವರನಿಗೆ ಪೂಜೆ

29BTP01
Published on

ಬೆಟ್ಟದಪುರ: ಸಮೀಪದ ಚಪ್ಪರದಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಶ್ರೀ ಕಾಡು ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಪೂಜೆ ನಡೆಯಿತು.


ಪ್ರತಿ ವರ್ಷದಂತೆ ಈ ವರ್ಷವೂ ಗ್ರಾಮಸ್ಥರು ಸ್ವಾಮಿಯ ಆರಾಧನೆಗೆ ಸಿದ್ಧತೆಗಳನ್ನು ಮಾಡಿಕೊಂಡು ಪೂಜಾ ಮಹೋತ್ಸವಕ್ಕೆ ಚಾಲನೆ ನೀಡಿದರು. ವಿಶೇಷ ಪೂಜೆ ಹಿನ್ನೆಲೆಯಲ್ಲಿ ಜನರು ಬಸವ ಮೂರ್ತಿಗೆ ಪೂಜೆ ಸಲ್ಲಿಸಿ ಇಷ್ಟಾರ್ಥ ಸಿದ್ಧಿಗಾಗಿ ಬೇಡಿಕೊಂಡರು. ನಂತರ ಪ್ರಸಾದ ನೀಡಲಾಯಿತು. ಪ್ರತಿ ವರ್ಷವೂ ಉತ್ತಮವಾಗಿ ಮಳೆ, ಬೆಳೆಯಾಗಲಿ ಎಂದು ಪೂಜೆ ಸಲ್ಲಿಸುವುದು ವಾಡಿಕೆಯಲ್ಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net