ವಿದ್ಯಾರ್ಥಿಗಳು ಅಧ್ಯಯನಶೀಲರಾಗಿರಿ

Woment University Regional Centre Bidar Teachers Day Photo
Published on

ಬೀದರ್: ವಿದ್ಯಾರ್ಥಿಗಳು ಸದಾ ಅಧ್ಯಯನಶೀಲರಾಗಿರಬೇಕು ಎಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಪ್ರೊ. ಡಿ.ಎಂ. ಮದರಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಓದಿನಿಂದ ಜ್ಞಾನದ ಮಟ್ಟ ಹೆಚ್ಚಿಸಿಕೊಳ್ಳಬಹುದು ಎಂದರು.
ಶಿಕ್ಷಕರು ಉತ್ತಮ ಸಮಾಜ ನಿರ್ಮಿಸುವ ಶಿಲ್ಪಿಗಳಾಗಿದ್ದಾರೆ. ಮಕ್ಕಳ ಉಜ್ವಲ ಭವಿಷ್ಯ ನಿರ್ಮಿಸುವಲ್ಲಿ ಅವರ ಪಾತ್ರ ಬಹಳ ಪ್ರಮುಖವಾಗಿದೆ ಎಂದು ತಿಳಿಸಿದರು.
ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜು ಪ್ರಾಚಾರ್ಯ ನಾಗಪ್ಪ ಜಾನಕನೋರ ಮಾತನಾಡಿ, ಶಿಕ್ಷಕ ವೃತ್ತಿ ಬಹಳ ಪವಿತ್ರವಾಗಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ವಿಷಯ ಬೋಧಕರಷ್ಟೇ ಆಗದೆ, ಪ್ರೇರಕ ಶಕ್ತಿಯೂ ಆಗಬೇಕು ಎಂದು ಹೇಳಿದರು.
ಕೇಂದ್ರದ ಉಪನ್ಯಾಸಕರಾದ ಶ್ರೀಲತಾ, ಈಶ್ವರ ರೆಡ್ಡಿ, ಡಾ. ಪಂಡಿತ ಗಂಗಶೆಟ್ಟಿ, ನಟರಾಜ ಸುತಾರ್, ಪ್ರಿಯಂಕಾ ಇದ್ದರು.
ನಿಶಾ ನಿರೂಪಿಸಿದರು. ಶಿಲ್ಪಾ ಸ್ವಾಗತಿಸಿದರು. ಸುಧಾರಾಣಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net