ಮೀಸಲು ಕಾಮಗಾರಿ ಮೊತ್ತ ಏರಿಕೆ ಭರವಸೆ

Ravindrakumar Hasankar
Published on

ಬೀದರ್: ರಾಜ್ಯ ಸರ್ಕಾರವು ವಿವಿಧ ಸರ್ಕಾರಿ ಕಾಮಗಾರಿಗಳಲ್ಲಿ ಎಸ್.ಸಿ, ಎಸ್.ಟಿ. ಗುತ್ತಿಗೆದಾರರ ಮೀಸಲು ಮೊತ್ತವನ್ನು ರೂ. 2 ಕೋಟಿಗೆ ಹೆಚ್ಚಿಸುವ ಭರವಸೆ ನೀಡಿದೆ ಎಂದು ಕರ್ನಾಟಕ ರಾಜ್ಯ ಎಸ್.ಸಿ, ಎಸ್.ಟಿ. ಗುತ್ತಿಗೆದಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರಕುಮಾರ ಹಾಸನಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸಂಘದ ರಾಜ್ಯ ಅಧ್ಯಕ್ಷ ಎನ್. ಮಹಾದೇವ ಸ್ವಾಮಿ ನೇತೃತ್ವದಲ್ಲಿ ಪದಾಧಿಕಾರಿಗಳು ಮಾಡಿದ ಮನವಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಸ್ಪಂದಿಸಿದ್ದಾರೆ ಎಂದು ಹೇಳಿದ್ದಾರೆ.
ಮೀಸಲು ಮೊತ್ತ ರೂ. 1 ಕೋಟಿಯಿಂದ ರೂ. 2 ಕೋಟಿಗೆ ಏರಿಕೆ ಮಾಡಲು ಮುಖ್ಯಮಂತ್ರಿ ಈಗಾಗಲೇ ಒಪ್ಪಿಗೆ ಸೂಚಿಸಿದ್ದಾರೆ. ಮುಂದಿನ ಅಧಿವೇಶನದಲ್ಲಿ ಈ ಸಂಬಂಧ ಕಾಯ್ದೆಗೆ ತಿದ್ದುಪಡಿ ತರಲಾಗುವುದೆಂದು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಎಲ್‍ಒಸಿ ಬಿಡುಗಡೆ ವೇಳೆ ಮೀಸಲು ಅನ್ವಯಿಸಲು ಹಾಗೂ ಕೆಆರ್‍ಡಿಎಲ್ ಮತ್ತು ನಿರ್ಮಿತಿ ಕೇಂದ್ರ ಕಾಮಗಾರಿಗೆ ಕಾರ್ಯಾದೇಶ ನೀಡಿದ ಸಂದರ್ಭದಲ್ಲೇ ಶೇ 30 ರಷ್ಟು ಮುಂಗಡ ಬಿಡುಗಡೆ, ಲೋಕೋಪಯೋಗಿ ಇಲಾಖೆಯ ಗುತ್ತಿಗೆ ಕಾಮಗಾರಿಗಳ ರೂ. 1,500 ಕೋಟಿ ಬಾಕಿ ಬಿಲ್‍ನ್ನು ಅಕ್ಟೋಬರ್ ಒಳಗೆ ಪಾವತಿಸುವ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಸಂಘದ ಬೇಡಿಕೆಗೆ ಸ್ಪಂದಿಸಿದ್ದಕ್ಕೆ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಕೃತಜ್ಞತೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net