

ಬೀದರ್: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇಲ್ಲಿಯ ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕøತಿಕ ಸಂಸ್ಥೆ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ ಕನ್ನಡ ಸೇವಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯ, ಕಾನೂನು, ಪತ್ರಿಕೋದ್ಯಮ, ಕಲೆ, ಸಂಸ್ಕøತಿ, ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ 68 ಜನರಿಗೆ ಪ್ರಶಸ್ತಿ ಕೊಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಹಣ್ಮು ಪಾಜಿ ತಿಳಿಸಿದ್ದಾರೆ.
ಆಸಕ್ತರು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಎರಡು ಪುಟಗಳ ತಮ್ಮ ಸಾಧನೆಯ ಮಾಹಿತಿಯೊಂದಿಗೆ ಅರ್ಜಿಯನ್ನು ಅಧ್ಯಕ್ಷರು, ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕøತಿಕ ಸಂಸ್ಥೆ, ಅಲ್ಲಮಪ್ರಭುನಗರ, ಗುಂಪಾ, ಬೀದರ್ ವಿಳಾಸಕ್ಕೆ ಇಲ್ಲವೇ ಇ-ಮೇಲ್ ವಿಳಾಸ hanmupaaji55@gmail.com ಗೆ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9449031557 ಅಥವಾ 9019296206 (ಪರಮೇಶ ವಿಳಾಸಪುರೆ) ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.