ಮಳೆ ನೀರು ಮರು ಬಳಕೆ ಅಗತ್ಯ

NYK Mandaknalli Programme Photo
Published on

ಬೀದರ್: ಸದ್ಯ ಮಳೆ ನೀರು ಮರು ಬಳಕೆ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರ ಆರ್.ಕೆ. ಚಾರಿ ಹೇಳಿದರು.
ಬೀದರ್ ತಾಲ್ಲೂಕಿನ ಮಂದಕನಳ್ಳಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೆಹರೂ ಯುವ ಕೇಂದ್ರದ ವತಿಯಿಂದ ಆಯೋಜಿಸಿದ್ದ ಮಳೆ ನೀರು ಹಿಡಿದಿದಿ ಹಂತ 3 ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಸರಿಯಾಗಿ ಮಳೆಯಾಗದೆ ನೀರಿನ ಸಮಸ್ಯೆ ಉಂಟಾಗುತ್ತಿದೆ. ಕಾರಣ, ಮಳೆ ನೀರು ವ್ಯರ್ಥವಾಗಿ ಹೋಗದಂತೆ ನೋಡಿಕೊಳ್ಳಬೇಕು. ಮನೆ, ಹೊಲಗಳಲ್ಲಿ ಸಂಗ್ರಹಿಸಿ ಅವಶ್ಯಕತೆಗೆ ಅನುಗುಣವಾಗಿ ಬಳಕೆ ಮಾಡಬೇಕು ಎಂದು ತಿಳಿಸಿದರು.
ಅಂತರ್ಜಲ ಹೆಚ್ಚಳಕ್ಕಾಗಿ ಮಳೆ ನೀರು ಭೂಮಿಯಲ್ಲಿ ಇಂಗಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ಪ್ರಾಚಾರ್ಯ ಚಂದ್ರಕಾಂತ ಘನಶೆಟ್ಟಿ, ಭಗತ್‍ಸಿಂಗ್ ಯುವಕ ಸಂಘದ ಅಧ್ಯಕ್ಷ ಸೋಮನಾಥ ಪೂಜಾರಿ, ಉಪನ್ಯಾಸಕರು ಇದ್ದರು.
ಕಮಠಾಣ: ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲೂ ಮಳೆ ನೀರು ಹಿಡಿದಿಡಿ ಚಿತ್ರಕಲಾ ಸ್ಪರ್ಧೆ ನಡೆಯಿತು.
ಉದ್ಘಾಟನಾ ಸಮಾರಂಭದಲ್ಲಿ ಆರ್.ಕೆ. ಚಾರಿ ಮಾತನಾಡಿದರು. ಪಾಚಾರ್ಯೆ ಪ್ರತಿಭಾ ಬಿ. ಅಧ್ಯಕ್ಷತೆ ವಹಿಸಿದ್ದರು. ಭಗತ್‍ಸಿಂಗ್ ಯುವಕ ಸಂಘದ ಅಧ್ಯಕ್ಷ ಸೋಮನಾಥ ಪೂಜಾರಿ ಇದ್ದರು. ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net