ಉಪನ್ಯಾಸಕಿ ಸುಮನ್‍ಗೆ ಶಿಕ್ಷಣ ರತ್ನ ಪ್ರಶಸ್ತಿ

Suman hebbalkar
Published on

ಬೀದರ್: ಇಲ್ಲಿಯ ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜು ಉಪನ್ಯಾಸಕಿ ಸುಮನ್ ಹೆಬ್ಬಾಳಕರ್ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ವತಿಯಿಂದ ಕೊಡಲಾಗುವ ಪ್ರಸಕ್ತ ಸಾಲಿನ ಕಲ್ಯಾಣ ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಶಿಕ್ಷಣ, ಕನ್ನಡ ನಾಡು, ನುಡಿ, ಕಲೆ, ಸಾಹಿತ್ಯ ಹಾಗೂ ಸಾಂಸ್ಕøತಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಅವರಿಗೆ ಪ್ರಶಸ್ತಿ ಲಭಿಸಿದೆ. ಬೀದರ್‍ನಲ್ಲಿ ಈಚೆಗೆ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಡುರಂಗ ಬೆಲ್ದಾರ್ ಮೊದಲಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net