ಗಾಂಧಿ ಗ್ರಾಮ ಪುರಸ್ಕಾರ ಸ್ವೀಕಾರ

sedol
Published on

ಹುಮನಾಬಾದ್: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ 2022-23ರ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾದ ಸೇಡೋಳ ಗ್ರಾಮ ಪಂಚಾಯಿತಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸೇಡೋಳ ಗ್ರಾಪಂ ಅಧ್ಯಕ್ಷ ವಿಠಲರಾವ ಡುಕರೆ, ಉಪಾಧ್ಯಕ್ಷೆ ಸವಿತಾ ಗೌತಮ ಹಾಗೂ ಪಿಡಿಒ ರಾಜಶೇಖರ ಬುಳ್ಳಾ ಪ್ರಶಸ್ತಿ ಸ್ವೀಕರಿಸಿದರು.
ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಮತ್ತು ಆಡಳಿತ ನಿರ್ವಹಣೆಯಲ್ಲಿ ತೋರಿದ ಸಾಧನೆ ಪರಿಗಣಿಸಿ ನಮ್ಮ ಗ್ರಾಪಂಗೆ ಪುರಸ್ಕಾರ ಬಂದಿದೆ. ಅಧ್ಯಕ್ಷ ಮತ್ತು ಸದಸ್ಯರ ಸಹಕಾರ ಮತ್ತು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕೆಲಸ ಮಾಡಲಾಗಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಸರ್ಕಾರದ ಅನುದಾನ ಉತ್ತಮವಾಗಿ ಬಳಸಿಕೊಂಡು ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಮಾಡಿದ್ದರಿಂದ ಪ್ರಶಸ್ತಿ ಲಭಿಸಿದೆ ಎಂದು ಪಿಡಿಒ ರಾಜಶೇಖರ ಬುಳ್ಳಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net