ಜಿಲ್ಲಾಮಟ್ಟದ ಕ್ರೀಡಾಕೂಟ ಸಮಾರೋಪ

Dist Level Sports Closing Photo-1
Published on

ಬೀದರ್: ಇಲ್ಲಿಯ ಮಂಗಲಪೇಟೆಯ ಎನ್.ಎಫ್. ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟ ಸಮಾರೋಪಗೊಂಡಿತು.
ಕಬಡ್ಡಿ, ಕೊಕ್ಕೋ, ವಾಲಿಬಾಲ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, 100 ಮೀ. ಓಟ, 200 ಮೀ. ಓಟ, 400 ಮೀ. ರಿಲೇ, 1,500 ಮೀ. ಓಟ, 3,000 ಮೀ. ಓಟದ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.
3,000 ಮೀ. ಓಟದ ಸ್ಪರ್ಧೆಯಲ್ಲಿ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜಿನ ಮಂಗಲಾ ಪ್ರಥಮ ಸ್ಥಾನ ಗಳಿಸಿದರು.
ಸಮಾರೋಪ ಸಮಾರಂಭದಲ್ಲಿ ಗೌರಶೆಟ್ಟಿ ಕಾಲೇಜಿನ ಪ್ರಾಚಾರ್ಯ ಡಾ. ಚಂದ್ರಪ್ಪ ಭತಮುರ್ಗೆ, ನಾಗನಾಥ ಬಿರಾದಾರ, ಸೂರ್ಯಕಾಂತ ಐನಾಪುರ, ರಮೇಶ ಪಾಟೀಲ, ಪೀರಣ್ಣ, ಕೆ. ಗೌತಮ ಭೋಸ್ಲೆ ಪಾಲ್ಗೊಂಡಿದ್ದರು.
ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಹಾಗೂ ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net