

ಭಾಲ್ಕಿ: ದೇಶದ ರಕ್ಷಣೆ ಮತ್ತು ನೈಸರ್ಗಿಕ ವಿಕೋಪದ ಸಂದರ್ಭಗಳಲ್ಲಿ ನಾಗರಿಕರನ್ನು ರಕ್ಷಿಸುವಲ್ಲಿ ಭಾರತೀಯ ವಾಯುಪಡೆ ಕೊಡುಗೆ ಅಪಾರವಾಗಿದೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠದ ಕಾರ್ಯದರ್ಶಿ ಶ್ರೀ ಮಹಾಲಿಂಗ ಸ್ವಾಮೀಜಿ ಹೇಳಿದರು.
ತಾಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾಯುಪಡೆ ದಿನಾಚರಣೆಯಲ್ಲಿ ಮಾತನಾಡಿದ ಅವರು, ಆಕಾಶದ ರಕ್ಷಣೆ ಜತೆಯಲ್ಲಿ ಮಾನವೀಯ ನೆಲೆಯಲ್ಲಿ ನೆರವಾಗಲು ವಾಯುಪಡೆ ಸದಾ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.
ಭಾರತೀಯ ವಾಯುಪಡೆ ಮಹತ್ತರ ಕಾರ್ಯಾಚರಣೆಗಳಲ್ಲಿ ಆಪರೇಷನ್ ವಿಜಯ್, ಆಪರೇಷನ್ ಮೇಘದೂತ್, ಆಪರೇಷನ್ ಕ್ಯಾಕ್ಟಸ್, ಆಪರೇಷನ್ ಸಫೇದ್ ಸಾಗರ್ ಪ್ರಮುಖವಾದವು. ಹಲವಾರು ದಂಗೆ ವಿರೋಧಿ ಮತ್ತು ಉಗ್ರ ನಿಗ್ರಹ ಕಾರ್ಯಾಚರಣೆಗಳಲ್ಲಿ ವಾಯುಪಡೆ ಸಕ್ರಿಯವಾಗಿ ಭಾಗವಹಿಸಿದೆ ಎಂದರು.
ಸಂಸ್ಥೆ ಆಡಳಿತಾಧಿಕಾರಿ ಮೋಹನರಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಶ್ರೀಧರರಡ್ಡಿ, ಶಶಿಕಾಂತ ಇತರರಿದ್ದರು.