ರಾಜ್ಯೋತ್ಸವ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

subbanna
Published on

ಬೀದರ್: ಕನ್ನಡ ರಾಜ್ಯೋತ್ಸವ ನಿಮಿತ್ತ ವಿಶ್ವ ಕನ್ನಡಿಗರ ಸಂಸ್ಥೆ ಕೊಡಮಾಡುವ ಕರ್ನಾಟಕ ರಾಜ್ಯೋತ್ಸವ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆ, ಚಿತ್ರಕಲೆ, ಹೋರಾಟ ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಲಾಗುವುದು. ಎರಡು ಭಾವಚಿತ್ರ ಮತ್ತು ಸ್ವವಿವರದೊಂದಿಗೆ ಅರ್ಜಿಯನ್ನು ಅ.25ರೊಳಗೆ ಸಲ್ಲಿಸಬೇಕು. ನವೆಂಬರ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಾಹಿತಿಗಾಗಿ ಮೊ.99016 12139ಗೆ ಸಂಪರ್ಕಿಸಬಹುದು ಎಂದು ಸಂಸ್ಥೆ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net