

ಬೀದರ್: ಕನ್ನಡ ರಾಜ್ಯೋತ್ಸವ ನಿಮಿತ್ತ ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಕೊಡಮಾಡುವ ಕನ್ನಡ ಸೇವಾರತ್ನ ಪ್ರಶಸ್ತಿಗೆ ಆಣದೂರ ಗ್ರಾಮದ ಚೇತನ್ ಸೋರಳ್ಳಿ ಆಯ್ಕೆಯಾಗಿದ್ದಾರೆ.
ಸೋರಳ್ಳಿ ಅವರ ಸಾಮಾಜಿಕ ಸೇವೆ ಗುರುತಿಸಿ ನ.2ರಂದು ಪೂಜ್ಯ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡುವುದಾಗಿ ಸಂಸ್ಥೆ ಜಿಲ್ಲಾಧ್ಯಕ್ಷ ಹಣ್ಮು ಪಾಜಿ ತಿಳಿಸಿದ್ದಾರೆ.