

ಬೀದರ್: ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಮಾಧ್ಯಮ ವಕ್ತಾರರಾಗಿ ಶಂಕರ ಜ್ಯಾಂತಿಕರ್ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಸಂಜುಕುಮಾರ ಡಿ.ಕೆ. ಅವರ ಶಿಫಾರಸಿನ ಮೇರೆಗೆ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಆರ್. ಧರ್ಮಸೇನ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಶಂಕರ ಅವರು ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಅವರಿಗೆ ಮಾಧ್ಯಮ ವಕ್ತಾರ ಹುದ್ದೆಯ ಹೆಚ್ಚುವರಿ ಹೊಣೆ ವಹಿಸಲಾಗಿದೆ.