ಆರೋಪಿಗಳ ಬಂಧನಕ್ಕೆ ಆಗ್ರಹ

Basavaraj Patil
Published on

ಬೀದರ್: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಹಲಕರ್ಟಿಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಲಿಂಗಾಯತ ಬ್ರಿಗೇಡ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ ಆಗ್ರಹಿಸಿದ್ದಾರೆ.
ಕಿಡಿಗೇಡಿಗಳು ಪಂಚಾಯಿತಿ ಕಚೇರಿ ಎದುರು ಕಟ್ಟಲಾಗಿದ್ದ ಬಸವೇಶ್ವರ ಭಾವಚಿತ್ರದ ಫ್ಲೆಕ್ಸ್ ಮಧ್ಯೆ ಅಲ್ಲಲ್ಲಿ ಸುಟ್ಟು ವಿಕೃತಿ ತೋರಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸವಣ್ಣನವರು ಮಹಾ ಮಾನವತಾವಾದಿ ಆಗಿದ್ದರು. ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದ್ದರು. ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು. ಕಿಡಿಗೇಡಿಗಳ ಕೃತ್ಯವು ಬಸವಾನುಯಾಯಿಗಳಿಗೆ ನೋವು ಉಂಟು ಮಾಡಿದೆ ಎಂದು ಹೇಳಿದ್ದಾರೆ.
ಬಸವಣ್ಣನವರ ಭಾವಚಿತ್ರಕ್ಕೆ ಅವಮಾನಿಸಿರುವುದು ಅಕ್ಷಮ್ಯ. ಹೀಗಾಗಿ ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ರೀತಿಯ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net