ಬಸವೇಶ್ವರ ಭಾವಚಿತ್ರಕ್ಕೆ ಅಪಮಾನ, ಕ್ರಮಕ್ಕೆ ಒತ್ತಾಯ

Kashappa Mulge
????????????????????????????????????
Published on

ಬೀದರ್: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಹಲಕರ್ಟಿಯಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ರಾಜ್ಯ ವಚನ ಸಾಹಿತ್ಯ ಸಂರಕ್ಷಣ ಸಮಿತಿಯ ಅಧ್ಯಕ್ಷ ಕಾಶಪ್ಪ ಮೂಲಗೆ ಒತ್ತಾಯಿಸಿದ್ದಾರೆ. ಭಾವಚಿತ್ರ ಅಪಮಾನ ಘಟನೆಯಿಂದ ಬಸವ ಭಕ್ತರ ಭಾವನೆಗಳಿಗೆ ನೋವು ಉಂಟಾಗಿದೆ ಎಂದು ತಿಳಿಸಿದ್ದಾರೆ.
ಬಸವಣ್ಣನವರು 12ನೇ ಶತಮಾನದಲ್ಲಿ ಕಲ್ಯಾಣ ರಾಜ್ಯ ನಿರ್ಮಾಣಕ್ಕೆ ಶ್ರಮಿಸಿದ್ದರು. ಅವರ ತತ್ವಗಳು ವಿಶ್ವಕ್ಕೆ ಬೆಳಕಾಗಿವೆ. ಭಾವಚಿತ್ರ ಅಪಮಾನ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net