

ಬೀದರ್: ಅಮಾವಾಸ್ಯೆ ಪ್ರಯುಕ್ತ ಶನಿವಾರ(ಆ. 14) ಬೀದರ್‍ನಿಂದ ಭಾಲ್ಕಿ ತಾಲ್ಲೂಕಿನ ಖಾನಾಪುರದ ಶನೇಶ್ವರ ದೇವಸ್ಥಾನಕ್ಕೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಬಸ್ ಸೌಲಭ್ಯ ಇರಲಿದೆ. ಭಕ್ತಾದಿಗಳು ವಿಶೇಷ ಬಸ್ ಪ್ರಯೋಜನ ಪಡೆಯಬೇಕು. ಶನೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಪೂಜೆ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಶನೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಮಲಶೆಟ್ಟೆಪ್ಪ ಭಾಲ್ಕೆ ಹಾಗೂ ಯುವ ಅಧ್ಯಕ್ಷ ಶರಣಪ್ಪ ಪಾಟೀಲ ಮನವಿ ಮಾಡಿದ್ದಾರೆ.