ಸಿದ್ಧಾರೂಢ ಮಠದಲ್ಲಿ ವಿವಿಧ ಕಾರ್ಯಕ್ರಮ

Shivkumar Swamiji Photo
Published on

ಬೀದರ್: ಮಹಾನವಮಿ ನಿಮಿತ್ತ ಇಲ್ಲಿಯ ಸಿದ್ಧಾರೂಢ ಮಠದಲ್ಲಿ ಅಕ್ಟೋಬರ್ 15 ರಿಂದ 25 ರ ವರೆಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಠದ ಪೀಠಾಧಿಪತಿ ಡಾ. ಶಿವಕುಮಾರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಪ್ರತಿ ದಿನ ಬೆಳಿಗ್ಗೆ ಮಹಾ ಪೂಜೆ, ಉಡಿ ತುಂಬುವ ಕಾರ್ಯಕ್ರಮ, ಸಂಜೆ 6 ರಿಂದ 8 ರ ವರೆಗೆ ‘ದೇವಿ ಭಾಗವತ ಪುರಾಣ' ಪ್ರವಚನ ನಡೆಯಲಿದೆ. ಅಕ್ಟೋಬರ್ 24 ರಂದು ಸಂಜೆ 5ಕ್ಕೆ ಸೀಮೋಲಂಘನ ಜರುಗಲಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿ ಕೃಪೆಗೆ ಪಾತ್ರರಾಗಬೇಕು ಎಂದು ಮಠದ ಆಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net