

ಬೀದರ್: ಕರ್ನಾಟಕ ಪ್ರದೇಶ ಕುರುಬರ ಸಂಘದ ಹಿರಿಯ ಉಪಾಧ್ಯಕ್ಷರಾಗಿ ಜಿಲ್ಲೆಯ ಬಸವರಾಜ ಹೇಡೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಸಂಘದ ಕಚೇರಿಯಲ್ಲಿ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾದರು. ಬಸವರಾಜ ಹೇಡೆ ಜಿಲ್ಲೆಯ ಗೊಂಡ (ಕುರುಬ) ಸಮಾಜದ ಮುಖಂಡರಲ್ಲಿ ಒಬ್ಬರಾಗಿದ್ದಾರೆ. ಮೈಲಾರ ಮಲ್ಲಣ್ಣ ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಜ್ಞಾನ ಗಂಗಾ ವಿದ್ಯಾಪೀಠ ಅಡಿಯಲ್ಲಿ ವಿವಿಧ ಶಾಲಾ, ಕಾಲೇಜುಗಳನ್ನು ಆರಂಭಿಸಿ, ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ.