ಕಾಂಗ್ರೆಸ್‍ಗೆ ಜೇಸನ್ ಮೋಡಿ ನೇಮಕ

Jesan Moody Appointment Letter
Published on

ಬೀದರ್: ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಯುವ ಮುಖಂಡ ಜೇಸನ್ ಮೋಡಿ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷದ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ನಾಸೀರ್ ಖಾನ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಜೇಸನ್ ಮೋಡಿ ಅವರು ಪಕ್ಷ ವಹಿಸಿದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.
ನೇಮಕಾತಿ ಪತ್ರ ವಿತರಣೆ: ನಗರದಲ್ಲಿ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂಖಾನ್ ಅವರು ಜೇಸನ್ ಮೋಡಿ ಅವರಿಗೆ ನೇಮಕಾತಿ ಪತ್ರ ವಿತರಿಸಿದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ನಾಸೇರ್ ಖಾನ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net