ವೈಜ್ಞಾನಿಕ ತಳಹದಿ ಮೇಲೆ ಬದುಕು ಕಟ್ಟಿಕೊಳ್ಳಿ

Noubad College - Copy
Published on

ಬೀದರ್: ವಿದ್ಯಾರ್ಥಿಗಳು ವೈಚಾರಿಕ ಹಾಗೂ ವೈಜ್ಞಾನಿಕ ತಳಹದಿ ಮೇಲೆ ಬದುಕು ಕಟ್ಟಿಕೊಳ್ಳಬೇಕು ಎಂದು ಹುಲಸೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಪ್ರೊ. ಮಲ್ಲಿಕಾರ್ಜುನ ಟಿ. ಕಾಂಬಳೆ ಹೇಳಿದರು.
ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸ್ನಾತಕೋತ್ತರ ಕೇಂದ್ರದಲ್ಲಿ ಆಯೋಜಿಸಿದ್ದ ಎಂ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಧ ಶ್ರದ್ಧೆ ಹಾಗೂ ಮೌಢ್ಯಕ್ಕೆ ಒಳಗಾಗಬಾರದು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಚಾರ್ಯೆ ಡಾ. ಜಯಶ್ರೀ ಪ್ರಭಾ ಮಾತನಾಡಿ, ಶಿಸ್ತು ಹಾಗೂ ಸಂಯಮ ರೂಢಿಸಿಕೊಂಡಲ್ಲಿ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸುಚಿತಾನಂದ ಕೆ. ಮಲ್ಕಾಪುರೆ ಮಾತನಾಡಿ, ಸತತ ಪ್ರಯತ್ನದಿಂದ ಉನ್ನತ ಸ್ಥಾನಕ್ಕೆ ಏರಬಹುದು ಎಂದು ತಿಳಿಸಿದರು.
ಪ್ರೊ. ಗಂಗಾಧರ ಕೋರಿ, ಡಾ. ರಾಜಕುಮಾರ ಅಲ್ಲೂರೆ, ಪ್ರೊ. ಶ್ರೀಕಾಂತ ಪಾಟೀಲ, ಬಸವರಾಜ ಕುರಿಕೋಟೆ, ಡಾ. ನಾಗೇಂದ್ರಪ್ಪ, ಡಾ. ಸುನೀಲಕುಮಾರ ಇದ್ದರು. ಕಾಲೇಜು ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net