ಬಸವ ದಳ ರಾಷ್ಟ್ರೀಯ ಅಧ್ಯಕ್ಷರಾಗಿ ಗಂದಗೆ

Rajendrakumar Gandge
Published on

ಬೀದರ್: ರಾಷ್ಟ್ರೀಯ ಬಸವ ದಳದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ರಾಜೇಂದ್ರಕುಮಾರ ಗಂದಗೆ ಅವರನ್ನು ನೇಮಕ ಮಾಡಲಾಗಿದೆ.
ಬಸವಕಲ್ಯಾಣದಲ್ಲಿ ನಡೆದ ಕಲ್ಯಾಣ ಪರ್ವದಲ್ಲಿ ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಡಾ. ಗಂಗಾದೇವಿ ಅವರು ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಗಂದಗೆ ಅವರ ಹೆಸರು ಘೋಷಣೆ ಮಾಡಿದರು. ಅವರಿಗೆ ಷಟ್‍ಸ್ಥಲ ಧ್ವಜ ನೀಡಿದರು.
ಗಂದಗೆ ಅವರು ಈ ಹಿಂದೆ ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಇದೀಗ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಗುರುತರವಾದ ಜವಾಬ್ದಾರಿ ಅವರಿಗೆ ನೀಡಲಾಗಿದೆ.
ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಗಂದಗೆ ಅವರನ್ನು ನೇಮಕ ಮಾಡಿದ್ದಕ್ಕೆ ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಕಲ್ಯಾಣ ಪರ್ವ ಉತ್ಸವ ಸಮಿತಿಯ ಅಧ್ಯಕ್ಷ ಸಂಜೀವಕುಮಾರ ಪಾಟೀಲ ಗೌಡಗಾಂವ್ ಸೇರಿದಂತೆ ಅನೇಕರು ಸಂತಸ ವ್ಯಕ್ತಪಡಿಸಿ, ಅಭಿನಂದನೆ ತಿಳಿಸಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net