ಚಿದ್ರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

Panditrao Chidri
Published on

ಬೀದರ್: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್ ಚಿದ್ರಿ ಅವರಿಗೆ ವಿಜಯಪುರದಲ್ಲಿ ನಡೆದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ರಾಜ್ಯ ಸರ್ಕಾರದಿಂದ ನೀಡಲಾಗುವ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘಗಳ ಮಹಾ ಮಂಡಳ ರಚಿಸಿ, ಸಹಕಾರ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಜಿಲ್ಲೆಯವರೇ ಆದ ಚಿದ್ರಿ ಅವರಿಗೆ ಸಹಕಾರ ರತ್ನ ಪ್ರಶಸ್ತಿ ಕೊಡಲಾಗಿದೆ. ತಮ್ಮ ಸೇವೆಯನ್ನು ಗುರುತಿಸಿ, ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕೆ ಚಿದ್ರಿ ಅವರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net