ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ

OM Siddi vinayak College student welcome programme Photo-1
Published on

ಬೀದರ್: ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಏನಾದರೂ ಕೊಡುಗೆ ನೀಡಬೇಕು ಎಂದು ಬೀದರ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಎಸ್. ಬಿರಾದಾರ ಹೇಳಿದರು.
ಓಂ ಸಿದ್ಧಿ ವಿನಾಯಕ ಪದವಿ ಮಹಾವಿದ್ಯಾಲಯ ವತಿಯಿಂದ ಇಲ್ಲಿಯ ಕಾಜಿ ಫಂಕ್ಷನ್ ಹಾಲ್‍ನಲ್ಲಿ ಆಯೋಜಿಸಿದ್ದ 2023-24ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಕೈಜೋಡಿಸಿದ್ದಲ್ಲಿ ಮಾತ್ರ ಯಾವುದೇ ದೇಶದ ಸರ್ವಾಂಗೀಣ ವಿಕಾಸ ಸಾಧ್ಯವಿದೆ ಎಂದು ತಿಳಿಸಿದರು.
ಶಿಕ್ಷಣದಿಂದ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವ ಡಾ. ಪರಮೇಶ್ವರ ನಾಯ್ಕ್ ನುಡಿದರು.
ವಿದ್ಯಾರ್ಥಿಗಳು ಬೀದರ್ ವಿಶ್ವವಿದ್ಯಾಲಯದ ಕೋರ್ಸ್‍ಗಳ ಪ್ರಯೋಜನ ಪಡೆಯಬೇಕು. ಪರಿಶ್ರಮದ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ತಿಳಿಸಿದರು.
ಕಾಲೇಜು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ. ವಿವಿಧ ಕಾರ್ಯಕ್ರಮಗಳ ಮೂಲಕ ಸಾಧನೆಗೆ ಪ್ರೇರಣೆ ನೀಡುತ್ತಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಸಿದ್ರಾಮ ಬಿಚಕುಂದೆ ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಹಾಲಹಳ್ಳಿ ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ಡಾ. ರವೀಂದ್ರನಾಥ ಗಬಾಡಿ, ಕಾಲೇಜು ಉಪಾಧ್ಯಕ್ಷ ಶಿವಕುಮಾರ ಕೋತಮಿರ, ನಿರ್ದೇಶಕರಾದ ಡಾ. ಪೃಥ್ವಿರಾಜ ಹಾಲಪ್ಪಗೋಳ್, ಡಾ. ವಿಜಯಕುಮಾರ ಚೆಟ್ಟಿ ಉಪಸ್ಥಿತರಿದ್ದರು.
ಕಾಲೇಜು ನಿರ್ದೇಶಕ ಡಾ. ನಿತೇಶಕುಮಾರ ಬಿರಾದಾರ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಅಭಿಲಾಷ, ಪಾಂಡುರಂಗ, ವಿನಯ್ ನಿರೂಪಿಸಿದರು. ಉಪನ್ಯಾಸಕಿ ಮಮತಾ ಕೆನಡಿಕರ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net